ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ !

ಚಿಕ್ಕಮಗಳೂರು: Tulu Times | ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ಮತ್ತೊಬ್ಬ ಮಹಿಳಾ ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ.

ಕೆಲವು ದಿನಗಳಿಂದ ಕಾಡಾನೆಗಳ ರೌದ್ರಾವತಾರ ಶುರುವಾಗಿದ್ದು, ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿ ನಡೆಸಿದೆ. ಈ ಘಟನೆಯಿಂದ  ಸ್ಥಳೀಯರು ಆತಂಕಗೊಂಡಿದ್ದಾರೆ.  ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಮೃತ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೂಲದ ಬೋರಮ್ಮ ಎನ್ನಲಾಗಿದೆ. ಇವರು ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ತುಳಿದು ಸಾಯಿಸಿದೆ.  ಕೊಪ್ಪ ಅರಣ್ಯ ವಿಭಾಗದ ಹುಣಸೆಹಳ್ಳಿ ಸಮೀಪದ ನಾಗೇಶಗೌಡರ ತೋಟದಲ್ಲಿ ಕಾಡಾನೆ ದಾಳಿ ನಡೆಸಿದೆ.

ಇದನ್ನೂ ಓದಿ: ಪುರುಷ ಪ್ರಯಾಣಿಕರಿಗೆ ಬಂಪರ್​ ಗುಡ್​ ನ್ಯೂಸ್..!

ನಾಲ್ಕು ದಿನಗಳಲ್ಲಿ ಇದು ಎರಡನೇ ಸಾವಾಗಿದೆ. ಈ ಹಿಂದೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಲ್ಲಪ್ಪ ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು. ಒಂದೇ ವಾರದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಜನರಿಗೆ ಭಯದ ವಾತಾವರಣ ಉಂಟಾಗಿದೆ.   ಅರಣ್ಯ ಇಲಾಖೆ, ಕಾಡಾನೆ ಸೆರೆಗೆ 7 ಕುಮ್ಮಿ ಆನೆಗಳನ್ನು ಸ್ಥಳಕ್ಕೆ ಕರೆತಂದಿತ್ತು. ಆದರೆ, ದಾಳಿ ಮಾಡುತ್ತಿರುವ ಕಾಡಾನೆಯು ‘ಮದ’ ಏರಿರುವುದರಿಂದ  ಮುನ್ನೆಚ್ಚರಿಕಾ ಕ್ರಮವಾಗಿ ಸದ್ಯಕ್ಕೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ChatGPT ಬಳಕೆದಾರರಲ್ಲಿ 18–24 ವಯೋಮಾನದವರಿಂದ ಅತೀ ಹೆಚ್ಚು ಸಂದೇಶ

Another victim of wild elephant attack in the coffee country!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 150

You cannot copy content of this page