ಕರ್ನಾಟಕ: Tulu Times | ಫೆ.28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪ್ರತಿದಿನ ಬೆಳಗ್ಗೆ 10:00ರಿಂದ ಮಧ್ಯಾಹ್ನ 1:00ರವರೆಗೆ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 3 ರಂದು ಇಂಗ್ಲಿಷ್ಮಾರ್ಚ್ 5 ಇತಿಹಾಸ, ಮಾರ್ಚ್ 6 ರಂದು ಭೌತಶಾಸ್ತ್ರ ಮಾರ್ಚ್ 9 ರಂದು ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮಾರ್ಚ್ 10ರಂದುಅರ್ಥಶಾಸ್ತ್ರ ಮಾರ್ಚ್ 13 ರಂದು ರಾಜ್ಯಶಾಸ್ತ್ರ, ಮಾರ್ಚ್ 14 ರಂದು ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 16ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ. ಏಪ್ರಿಲ್ 7, 2026 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರಾದರೆ, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ. ರಾಜ್ಯದ ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದ ರೂಲ್ಸ್ ಗಳೇನು…?
ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದ್ದು, ಹತ್ತಿರದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ GPS ಸಿಸ್ಟಮ್ ಅಳವಡಿಸಲಾಗುವುದು. ವಿದ್ಯಾರ್ಥಿಗಳು ಮಾತ್ರವಲ್ಲದೆ, ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳೂ ಸಹ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಿಬ್ಬಂದಿಯೂ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು.
Second PUC exam starts from Feb. 28..what are the rules..?- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










