Hyderabad: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸೊಂದು ಬೆಂಕಿಗಾಹುತಿಯಾದ ದಾರುಣ ಘಟನೆ ನಡೆದಿದೆ. ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಅಗ್ನಿದುರಂತಕ್ಕೆ ಕಾರಣವೇನು?
ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಮೊದಲು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಬಸ್ ಅಡಿಯಲ್ಲಿ ಸಿಲುಕಿ ಬೆಂಕಿ ಹೊತ್ತಿಕೊಂಡಿದೆ. ಅದು ಇಡೀ ಬಸ್ ಅನ್ನೇ ಆವರಿಸಿಕೊಂಡಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಕೂಡ ಸಾವನ್ನಪಿರಬಹುದು ಎಂದು ಅಂದಾಜಿಸಲಾಗಿದೆ. ಆ ಸಮಯದಲ್ಲಿ ಎಲ್ಲಾ ಪ್ರಯಾಣಿಕರು ಮಲಗಿದ್ದರು.
ಬಸ್ ಚಾಲಕ ಬದಲಿ ಚಾಲಕನನ್ನು ಎಬ್ಬಿಸಿ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಿದ್ದಾರೆ. ವೋಲ್ವೊ ಬಸ್ ಆದ ಹಿನ್ನೆಲೆಯಲ್ಲಿ ಬೆಂಕಿ ಕೂಡ ಬೇಗ ಹತ್ತಿಕೊಂಡಿದೆ. ಜತೆಗೆ ಕಿಟಕಿಗಳು ಮುಚ್ಚಿದ್ದ ಪರಿಣಾಮ ಕಿಟಕಿಯನ್ನು ಒಡೆದು ಪ್ರಯಾಣಿಕರನ್ನು ಹೊರತರಲಾಯಿತು. ಅಷ್ಟರೊಳಗೆ ಹಲವು ಪ್ರಯಾಣಿಕರು ಉಸಿರು ಚೆಲ್ಲಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿದೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ ಬೆಂಕಿ ಎಷ್ಟು ಬೇಗನೆ ಹರಡಿತೆಂದರೆ, ಹೆಚ್ಚಿನ ಪ್ರಯಾಣಿಕರು ಏನಾಗುತ್ತಿದೆ ಎಂದು ಅರಿತುಕೊಳ್ಳುವ ಮೊದಲೇ ಬೆಂಕಿಯಲ್ಲಿ ಬೆಂದುಹೋಗಿದ್ದಾರೆ. ಕೆಲವರು ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: Belthangady: ರಿಕ್ಷಾದಲ್ಲಿ ಅಕ್ರಮ ಗೋ ಮಾಂಸ ಸಾಗಾಟ – ಎಫ್‌ಐಆರ್ ದಾಖಲು
==============
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ: https://www.youtube.com/@tulutimess











