ಬ್ರೇಕಿಂಗ್ ನ್ಯೂಸ್
ಕರ್ನಾಟಕಮಂಗಳೂರು

ಮಂಗಳೂರು: ಮೀನು ಹಿಡಿಯುವ ಯುವಕ ನಾಪತ್ತೆ

ಮಂಗಳೂರು: Tulu Times | ಸುಮಾರು 4 ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದ ಶಾನೇಶ್ (25) ಎಂಬವರು ಫೆ.18ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪಣಂಬೂರು ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು : ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್ ಫೆಬ್ರವರಿ 26ರಂದು ಉದ್ಘಾಟನೆ

ಮೀನು ಹಿಡಿಯುವ ಕೆಲಸ ಮಾಡಿಕೊಂಡಿದ್ದು,ಶಾನೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆಯೂ ಕೂಡ ಮನೆ ಬಿಟ್ಟು ಹೋಗಿ 2-3 ದಿನ ಬಿಟ್ಟು ವಾಪಸ್ಸು ಬಂದಿದ್ದರು. ಆದರೆ ಕಳೆದ ಕೆಲವು ದಿನಗಳ ಹಿಂದೆ ಹೋದವರು ಮತ್ತೆ ವಾಪಾಸು ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಿಳಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಧರಿಸಿದ್ದರು. ಸುಮಾರು 5.6 ಅಡಿ ಎತ್ತರ, ಗೋಧಿ ಮೈಬಣ್ಣ ಸಪೂರ ಶರೀರ. ತಮಿಳು, ತುಳು, ಕನ್ನಡ ಮಾತನಾಡುತ್ತಾರೆ. ಈ ವ್ಯಕ್ತಿ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Mangaluru: Young fisherman goes missing- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 227

You cannot copy content of this page