ಬ್ರೇಕಿಂಗ್ ನ್ಯೂಸ್
ಕರ್ನಾಟಕ

ವಿಜಯ್-ರಶ್ಮಿಕಾಗೆ ಶುಭ ಹಾರೈಸಿದ ಪ್ರಧಾನಿ ಮೋದಿ !

ಕರ್ನಾಟಕ: Tulu Times | ವಿಜಯ್-ರಶ್ಮಿಕಾ ನಾಳೆ ಅದ್ಧೂರಿಯಾಗಿ ಮದುವೆಯಾಗುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಇಬ್ಬರು ಕಪಲ್ಸ್‌ ಗೆ ಶುಭಕೋರಿದ್ದಾರೆ. ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ರಶ್ಮಿಕಾ ಹಾಗೂ ವಿಜಯ್ ಅವರ ಅದ್ಧೂರಿ ರಿಸೆಪ್ಪನ್ ನಡೆಯಲಿದೆ. ಪ್ರಧಾನಿ ಮೋದಿ ಅವರಿಗೂ ಸಮಾರಂಭಕ್ಕೆ ಆಹ್ವಾನ ನೀಡಿದ್ದು, ಇದೀಗ ಶುಭಕಾರ್ಯಕ್ಕೆ ಮೋದಿ ಜೋಡಿಗೆ ಶುಭಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು..?

ಫೆಬ್ರವರಿ 26, 2026 ರಂದು ನಡೆಯಲಿರುವ ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ ನೀವು ನೀಡಿದ ಆಮಂತ್ರಣವನ್ನು ಸ್ವೀಕರಿಸಿ ಬಹಳ ಸಂತೋಷವಾಯಿತು. ಈ ಅತ್ಯಂತ ಹರ್ಷದಾಯಕ ಮತ್ತು ಮಂಗಳಕರ ಸಂದರ್ಭದಲ್ಲಿ ದೇವರಕೊಂಡ ಮತ್ತು ಮಂದಣ್ಣ ಕುಟುಂಬಗಳಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಮೋದಿ ಬರೆದಿದ್ದಾರೆ.

ವಿಜಯ್ ಆಗಲಿ ಅಥವಾ ರಶ್ಮಿಕಾ ಆಗಲಿ ತಮ್ಮ ಚಲನಚಿತ್ರಗಳ ಚಿತ್ರಕಥೆಗಳಿಗೆ ಹೊಸಬರೇನಲ್ಲ. ಆದರೆ ಪ್ರೀತಿ ಮತ್ತು ಅನುರಾಗದಿಂದ ತುಂಬಿದ ಅವರ ನಿಜ ಜೀವನದ ಈ ದೈವಿಕವಾಗಿ ಬರೆಯಲ್ಪಟ್ಟ ಅಧ್ಯಾಯವು, ಅವರು ಬೆಳ್ಳಿತೆರೆಯ ಮೇಲೆ ಸೃಷ್ಟಿಸಿದ ಮ್ಯಾಜಿಕ್‌ಗಿಂತ ಖಂಡಿತವಾಗಿಯೂ ಮಿಗಿಲಾಗಿರುತ್ತದೆ ಎಂದಿದ್ದಾರೆ. ಪರಸ್ಪರ ಕಾಳಜಿ ಮತ್ತು ಪ್ರೀತಿಯಿಂದ ಅವರು ಜವಾಬ್ದಾರಿಗಳನ್ನು ಹಂಚಿಕೊಳ್ಳಲಿ, ಪರಸ್ಪರರ ಅಪೂರ್ಣತೆಗಳನ್ನು ಅಪ್ಪಿಕೊಳ್ಳಲಿ. ಒಬ್ಬರ ಬಲದಿಂದ ಇನ್ನೊಬ್ಬರು ಕಲಿಯಲಿ ಮತ್ತು ನಿಜವಾದ ಪಾಲುದಾರರಾಗಿ ಜೀವನದ ಪಯಣವನ್ನು ಸಾಗಿಸಲಿ ಎಂದು ಹಾರೈಸುತ್ತೇನೆ ಎಂದರು.

Prime Minister Modi wishes Vijay-Rashmika all the best!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 149

You cannot copy content of this page