ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಬ್ಯಾನರ್‌ ಹರಿದು ಹಾಕಿದ ಕಿಡಿಗೇಡಿಗಳು !

ಬೆಳ್ತಂಗಡಿ: Tulu Times | ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಮಾನ್ಯ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪುಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನ‌ರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ಇದನ್ನೂ ಓದಿ: ಮಹಿಳೆಯರಲ್ಲಿನ ಗರ್ಭಾಶಯ ಕ್ಯಾನ್ಸರ್ ತಡೆಗೆ ಉಚಿತ ಲಸಿಕಾ ಅಭಿಯಾನ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.  ಉಜಿರೆ ಗುರಿಪಳ್ಳ ಇಂದಬೆಟ್ಟು ಸಂಪರ್ಕ ರಸ್ತೆಯ ಅಂಬಡಬೆಟ್ಟು ಸೇತುವ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಕಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ  2.5ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ಕೃತ್ಯ ಮಾಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Belthangady: Miscreants tore down Rakshit Shivaram’s banner!- ತುಳುಟೈಮ್ಸ್

ಇದನ್ನೂ ಓದಿ: ಸರಕಾರಿ ಖಾಲಿ ಹುದ್ದೆಗಳಿಗೆ ಭ್ರಷ್ಟಾಚಾರ ರಹಿತ ನೇಮಕಾತಿ : ಡಿಕೆಶಿ

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 151

You cannot copy content of this page