ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ಪುತ್ತೂರು: ಮಹಿಳಾ ಕಾಲೇಜು ಪ್ರಾಂಶುಪಾಲೆ ಅಮಾನತು

ಪುತ್ತೂರು: Tulu Times | ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಮಹಿಳಾ ಕಾಲೇಜು ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು  ಅಮಾನತು ಮಾಡಲಾಗಿದೆ.ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದ್ದಾರೆ.

ಹತ್ತಿರದಲ್ಲಿ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದಾಗಿ ಉಂಟಾದ ದೂಳಿನಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ ಅಂತ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು  ಕ್ಲಾಸ್‌ ನಿಂದ ಆಚೆ ಬಂದು ಪ್ರತಿಭಟನೆ ನಡೆಸಿದ್ದರು. ಈ ವಿದ್ಯಾರ್ಥಿಗಳ  ಪ್ರತಿಭಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇನ್ನು ವಿದ್ಯಾರ್ಥಿನಿಯರ ಪರವಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ಮಾತನಾಡಿದ್ದರು.  ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಶಾಸಕ ಅಶೋಕ್ ರೈ ಅವರ ಜೊತೆ ಮಾತಿನ ಚಕಮಕಿ ಕೂಡ ನಡೆದಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ವೇದಶ್ರೀ ನಿಡ್ಯಾ ಅವರನ್ನು ವಿಧ್ಯಾರ್ಥಿನಿಯರ ಪ್ರತಿಭಟನೆಗೆ ಸಹಕಾರ ನೀಡಿದ ಆರೋಪ ಹಾಗೂ ಶೈಕ್ಷಣಿಕ ಹಾಗು ಆಡಳಿತಾತ್ಮಕ ಜವಾಬ್ದಾರಿ ಸಮರ್ಪಕ‌ವಾಗಿ ನಿರ್ವಹಿಸದ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ.

Puttur: Women’s College Principal suspended- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page