ಮಂಗಳೂರು: Tulu Times | ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ತಂದೆ – ಮಗ ಅರೆಸ್ಟ್ ಆಗಿದ್ದಾರೆ. ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಬುಗೆಡ್ಡೆಯ ಗ್ರಾಮ ಸಂಘದ ಬಳಿಯ ರೈಲ್ವೆ ಹಳಿಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ನೀವು ಇಲ್ಲಿ ಕಿಸ್ ಮಾಡುತ್ತಿದ್ದಿರಿ, ನಾನು ರೆಕಾರ್ಡಿಂಗ್ ಮಾಡುತ್ತಿದ್ದೇನೆ, ಫೇಸ್‌ಬುಕ್‌ನಲ್ಲಿ ಹಾಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.
ಫೆಬ್ರವರಿ 23ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನಂತರ ವಿದ್ಯಾರ್ಥಿಯನ್ನು ತಡೆದು ರೈಲ್ವೆ ಹಳಿಯಿಂದ ಪಕ್ಕದ ರಸ್ತೆಗೆ ಕರೆದುಕೊಂಡು ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ. ಈ ಕಡೆ ಬಂದರೆ ಕೈಕಾಲು ಮುರಿಯುವುದಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿದ್ದಾರೆ.ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಅವರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Mangaluru: Moral police raid on underage male and female students- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










