ಬ್ರೇಕಿಂಗ್ ನ್ಯೂಸ್
ದೇಶ

ಭಾರತ ಕ್ರಿಕೆಟ್ ತಂಡ ಸತತ ಮೂರನೇ ಬಾರಿ ವಿಶ್ವಕಪ್ ಗೆದ್ದ ಹೆಗ್ಗಳಿಕೆ !

ಕ್ರಿಕೆಟ್ : Tulu Times l ಭಾರತ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಇಂಡಿಯಾ ತಂಡ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಭರ್ಜರಿಯಾಗಿ ಸೋಲಿಸಿ ಚಾಂಪಿಯನ್ ಪಟ್ಟವನ್ನು ಗೆದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಆಲ್‌ರೌಂಡ್ ಪ್ರದರ್ಶನ ನೀಡಿ ಕಪ್ ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ತಂಡ ಸತತ ಎರಡನೇ ಬಾರಿ ಟಿ20 ವಿಶ್ವಕಪ್ ಗೆದ್ದು ವಿಶ್ವ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡಿದೆ.

ಬ್ಯಾಟಿಂಗ್‌ನಲ್ಲಿ ಭಾರತದ ಭರ್ಜರಿ ಪ್ರದರ್ಶನ ;

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಿಂದಲೇ ಉತ್ತಮ ಆಟದ ಪ್ರದರ್ಶನ‌ ನೀಡಿತ್ತು. ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಕೇವಲ 21 ಎಸೆತಗಳಲ್ಲಿ 51 ರನ್‌ಗಳನ್ನು ಸಿಡಿಸಿ ತಂಡಕ್ಕೆ ಅದ್ಭುತ ಆರಂಭ ನೀಡಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ಇದಾದ ಬಳಿಕ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 89 ರನ್ ಗಳಿಸಿದರು. ಅವರು 8 ಸಿಕ್ಸರ್ ಹಾಗೂ 5 ಬೌಂಡರಿ ಬಾರಿಸಿ ಕಿವೀಸ್ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ನಲುಗಿಸಿದರು. ಇನ್ನೊಂದೆಡೆ ಇಶನ್ ಕಿಶನ್ ಕೂಡ ವೇಗದ ಆಟವಾಡಿ 54 ರನ್ ಗಳಿಸಿದರು. ಅಂತಿಮ ಓವರ್‌ಗಳಲ್ಲಿ ಶಿವಂ ದುಬೆ ಕೇವಲ 8 ಎಸೆತಗಳಲ್ಲಿ 26 ರನ್ ಸಿಡಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಈ ಮೂಲಕ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭಾರೀ 255 ರನ್ ಗಳಿಸಿತು.

ಬೌಲಿಂಗ್‌ನಲ್ಲಿ ಬುಮ್ರಾ ಮಿಂಚು ;

256 ರನ್ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ತಂಡಕ್ಕೆ ಭಾರತೀಯ ಬೌಲರ್‌ಗಳು ಭಾರಿ ಸವಾಲು ನೀಡಿದರು. ವೇಗದ ಬೌಲರ್ ಜಾಸ್ಪ್ರಿತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶಿಸಿ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 4 ವಿಕೆಟ್ ಪಡೆದರು. ಇದಕ್ಕೆ ಜೊತೆಗೆ ಅಕ್ಷರ್ ಪಟೇಲ್ ಮೂರು ವಿಕೆಟ್ ಪಡೆದು ಪ್ರಮುಖ ಪಾತ್ರವಹಿಸಿದರು. ವರುಣ್ ಚಕ್ರವರ್ತಿ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು. ಭಾರತದ ಬೌಲಿಂಗ್ ದಾಳಿಯನ್ನು ಎದುರಿಸಲು ಸಾಧ್ಯವಾಗದೆ ನ್ಯೂಜಿಲ್ಯಾಂಡ್ ತಂಡ 19 ಓವರ್‌ಗಳಲ್ಲಿ 159 ರನ್‌ಗೆ ಆಲೌಟ್ ಆಯಿತು.

ದೇಶಾದ್ಯಂತ ಸಂಭ್ರಮ ;

ಅಂತಿಮ ವಿಕೆಟ್ ಬೀಳುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ಸಂಭ್ರಮದ ಅಲೆ ಹರಡಿತು. ಭಾರತೀಯ ಆಟಗಾರರು ಮೈದಾನಕ್ಕೆ ಓಡಿ ಬಂದು ಪರಸ್ಪರ ಅಪ್ಪಿಕೊಂಡು ಸಂತೋಷ ವ್ಯಕ್ತಪಡಿಸಿದರು. ಕೆಲ ಆಟಗಾರರು ಸಂತೋಷದ ಕಣ್ಣೀರನ್ನೂ ಹಾಕಿದರು. ದೇಶದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ಮೂರನೇ ಬಾರಿ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದ್ದು, ತನ್ನದೇ ದೇಶದಲ್ಲಿ ಟೂರ್ನಿಯನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಯನ್ನು ಗಳಿಸಿದೆ. ಒಟ್ಟಿನಲ್ಲಿ ಈ ವಿಜಯವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸದಾ ನೆನಪಾಗುವ ಸುವರ್ಣ ಅಧ್ಯಾಯವಾಗಿ ಉಳಿಯಲಿದೆ.

Indian cricket team won the World Cup for the third consecutive time! – ತುಳುಟೈಮ್ಸ್

ಇದನ್ನೂ ಓದಿ : ಇಂದಿನ ರಾಶಿಫಲ: 2026 ಮಾರ್ಚ್ 9

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ : https://youtu.be/UoqCXzww-FI?si=EjkDpEoDYxjjEqpZ

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 18

You cannot copy content of this page