ಬ್ರೇಕಿಂಗ್ ನ್ಯೂಸ್
ಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ‌ದ ನಟರಾಜ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ : ಬಿಜೆಪಿ ಮಹಿಳಾ ಮೋರ್ಚಾದಿಂದ ದೂರು

ಪುತ್ತೂರು : Tulu Times l ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು (ಮಾ.11) ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಚಾರಿಟೇಬಲ್ ಕಾಯ್ದೆ 1997 ಅಡಿಯಲ್ಲಿ ನೋಂದಾಯಿತವಾಗಿದ್ದು ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ, ಒಳಪಟ್ಟಿರುವ ದೇವಸ್ಥಾನದ ಆಸ್ತಿ, ಹಾಲ್, ಕಟ್ಟಡಗಳು ಹಾಗೂ ಇತರೆ ಸೌಕರ್ಯಗಳು ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದು ಕಾನೂನು ಸ್ಪಷ್ಟಪಡಿಸುತ್ತದೆ. ವಿಶೇಷವಾಗಿ ಸೆಕ್ಷನ್ 63 ಪ್ರಕಾರ ದೇವಸ್ಥಾನದ ಆಸ್ತಿಗಳ ಬಳಕೆ ಮತ್ತು ಅದರ ನಿರ್ವಹಣೆ ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಸೀಮಿತವಾಗಿರಬೇಕು ಮತ್ತು ಅವುಗಳ ದುರುಪಯೋಗವನ್ನು ತಡೆಯುವ ಜವಾಬ್ದಾರಿ ಆಡಳಿತಾಧಿಕಾರಿಗಳಿಗೆ ಇರುವುದಾಗಿ ಹೇಳಿಕೆಯಲ್ಲಿ ನೀಡಿರುವುದು ವರದಿಯಾಗಿದೆ.

ಮಾ. 08 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಇದರ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಸ್ಥಾನದ ಪವಿತ್ರ ಆವರಣದಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸುವುದು ದೇವಸ್ಥಾನದ ಧಾರ್ಮಿಕ ಸ್ವರೂಪಕ್ಕೆ ಧಕ್ಕೆ ತರುವಂತದ್ದು ಮತ್ತು ಮೇಲ್ಕಂಡ ಕಾಯ್ದೆಯ ಉದ್ದೇಶ ಹಾಗೂ ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಅನ್ಯಧರ್ಮದ ವ್ಯಕ್ತಿಗಳು ಕೂಡ ಭಾಗಿಯಾಗಿರುವುದು ದೇವಸ್ಥಾನದ ಭಕ್ತರಾದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಕಾರ್ಯ ನಡೆದಿರುತ್ತದೆ ಎಂದು ದೂರಿನಲ್ಲಿ ಬರೆದಿರುತ್ತಾರೆ.

ಇಂತಹ ಘಟನೆಗಳು ಮುಂದುವರಿದರೆ ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದ್ದು, ಸಮಾಜದಲ್ಲಿ ಅನಾವಶ್ಯಕ ಉದ್ವಿಗ್ನತೆ ಉಂಟಾಗುವ ಪರಿಸ್ಥಿತಿ ಉಂಟಾಗಬಹುದು.ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿದ ಘಟನೆ ಕುರಿತು ತಕ್ಷಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸ್ವರ್ಣಲತಾ ಹೆಗಡೆ, ಕಾರ್ಯದರ್ಶಿ ಜಯಲಕ್ಷ್ಮಿ, ನಗರ ಮಂಡಲ ಅಧ್ಯಕ್ಷರು ಶಿವಕುಮಾರ್ ಪಿಬಿ, ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್ , ಓಬಿಸಿ ಮೋರ್ಚಾ ಅಧ್ಯಕ್ಷರು ನಿರಂಜನ್ ಮಾನ್ಯ, ಶಕ್ತಿಕೇಂದ್ರ ಅಧ್ಯಕ್ಷರು ನಾಗೇಂದ್ರ ಬಾಳಿಗ, ಗ್ರಾಮಾಂತರ ಮಂಡಲ ಉಪಾಧ್ಯಕ್ಷರು ನಾಗೇಶ್ ಕಾರ್ಯಕರ್ತ ರವಿ ಉಪಸ್ಥಿತರಿದ್ದರು.

Political event at Nataraja Vedike of Puttur Mahalingeshwara Temple: Complaint from BJP Mahila Morcha – ತುಳುಟೈಮ್ಸ್

ಇದನ್ನೂ ಓದಿ : ಇಂದಿನ ರಾಶಿ ಭವಿಷ್ಯ: ಮಾರ್ಚ್ 11, 2026

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/p4-vd_M93Z8?si=uYS2QRUNnGNwDDg3

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 12

You cannot copy content of this page