ಬ್ರೇಕಿಂಗ್ ನ್ಯೂಸ್
ಕ್ರೀಡೆ

ಐಪಿಎಲ್ 2026 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದಾರೆ ಆರ್‌ಸಿಬಿ – ಎಸ್‌ಆರ್‌ಎಚ್

ಬೆಂಗಳೂರು: Tulu Times l ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ 19ನೇ ಆವೃತ್ತಿಯ ಐಪಿಎಲ್ 2026ರ ಟೂರ್ನಿಯ ಭಾಗಶಃ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತದೆ. ಇದರಲ್ಲಿ ಕ್ರಿಕೆಟ್ ಅಭಿಮಾನಿಗಳು ಬಹಳ ಉತ್ಸುಕರಾಗಿ ಕಾಯುತ್ತಿರುವ ಆರ್ ಸಿಬಿ ತಂಡ ಹಾಗೂ ಸನ್ ರೈಸಸ್ ಹೈದರಾಬಾದ್ ಪಂದ್ಯದಿಂದ ಆರಂಭಗೊಳ್ಳಲಿದೆ.

ಮಾರ್ಚ್ 28 ಶನಿವಾರ ನಡೆಯುವ ಉದ್ಘಾಟನಾ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಲ್ಲದೇ,‌ ಬಿಸಿಸಿಐ ಪ್ರಸ್ತುತ ಟೂರ್ನಿಯ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದ್ದು, ಮಾರ್ಚ್ 28ರಿಂದ ಏಪ್ರಿಲ್ 12ರವರೆಗೆ ನಡೆಯಲಿರುವ 20 ಪಂದ್ಯಗಳ ವಿವರಗಳನ್ನು ಪ್ರಕಟಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಈ ಹಂತ ಹಂತದ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ಆಯೋಗ ಮತದಾನದ ದಿನಾಂಕಗಳನ್ನು ಅಂತಿಮಗೊಳಿಸಿದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಈ ಬಾರಿ ಕೂಡ ಐಪಿಎಲ್ ಟೂರ್ನಿಯಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ.

ಇದೇ ವೇಳೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳಿಗೆ ಸಂಬಂಧಿಸಿದಂತೆ ಭದ್ರತಾ ಕ್ರಮಗಳ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಹಿಂದಿನ ಪಂದ್ಯಗಳಲ್ಲಿ ದೊಡ್ಡ ಪ್ರಮಾಣದ ಜನಸ್ತೋಮ ಕಂಡುಬಂದ ಹಿನ್ನೆಲೆ, ಪಂದ್ಯಗಳಿಗೆ ಅಂತಿಮ ಅನುಮತಿ ನೀಡುವ ಮೊದಲು ಕರ್ನಾಟಕ ಸರ್ಕಾರದ ತಜ್ಞ ಸಮಿತಿ ಪರಿಶೀಲನೆ ನಡೆಸಲಿದೆ. ಇದಕ್ಕಾಗಿ ಮಾರ್ಚ್ 13ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಯಲಿದೆ.

ಟೂರ್ನಿಯ ಮೊದಲ ವಾರಾಂತ್ಯದಲ್ಲೇ ದೇಶದ ವಿವಿಧ ನಗರಗಳಲ್ಲಿ ರೋಚಕ ಪಂದ್ಯಗಳು ನಡೆಯಲಿವೆ. ಮಾರ್ಚ್ 29ರಂದು ಮುಂಬೈನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 30ರಂದು ಗುಹ್ವಾಟಿಯಲ್ಲಿ ರಾಜಸ್ತಾನ್‌ ರಾಯಲ್ಸ್ ಮತ್ತು ಚೆನ್ನೈ ನಡುವೆ ಪಂದ್ಯ ನಡೆಯಲಿದೆ. ಐಪಿಎಲ್ 2026ರ ಆರಂಭಿಕ ಹಂತದ ಪಂದ್ಯಗಳು ದೇಶದ 10 ವಿಭಿನ್ನ ಕ್ರೀಡಾಂಗಣಗಳಲ್ಲಿ ನಡೆಯಲಿದ್ದು, ಟೂರ್ನಿಯ ಆರಂಭವೇ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡುವ ನಿರೀಕ್ಷೆ ಮೂಡಿಸಿದೆ.

IPL 2026: RCB – SRH to face off at Chinnaswamy Stadium – ತುಳುಟೈಮ್ಸ್

ಇದನ್ನೂ ಓದಿ :ಮಾದಕವ್ಯಸನಿಗಳಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು : ಕಾರ್ಯಾಚರಣೆ ಹೆಚ್ಚಿಸಿದ ಪೋಲಿಸರು

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/-PlvbIZDxfU?si=dgZxMl8gl0RbhDgS

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 5

You cannot copy content of this page