ಬ್ರೇಕಿಂಗ್ ನ್ಯೂಸ್
ಕರ್ನಾಟಕದೇಶ

ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್, ಇಬ್ಬರು ಸಜೀವ ದಹನ

ಜೈಪುರ: ಅ. 28 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಜೈಪುರ-ದೆಹಲಿ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಕಚ್ಚಾ ರಸ್ತೆಯ ಮೂಲಕ ಸಾಗುತ್ತಿದ್ದ ಬಸ್ಸಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿತ್ತು, ನಂತರ ಅದನ್ನು ನಂದಿಸಲಾಯಿತು ಎಂದು ಜೈಪುರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದ ಬಸ್ಸನ್ನು, ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಯಿತು. ಗಾಯಾಳುಗಳನ್ನು ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: Uppinangady: ಡಾ. ನುಶ್ರತ್‌ಗೆ ಶ್ರೀನಿವಾಸ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 246

You cannot copy content of this page