ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Belthangady: 20ಕ್ಕೂ ಹೆಚ್ಚು ಸೌಜನ್ಯಾ ಪರ ಹೋರಾಟಗಾರರ ಮೇಲೆ ಎಫ್‌ಐಆರ್‌

Belthangady: ಅನುಮತಿಯಿಲ್ಲದೆ ಪ್ರತಿಭಟನೆ ಮಾಡಿದ 20ಕ್ಕೂ ಅಧಿಕ ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅನುಮತಿಯಿಲ್ಲದೆ ಪೊಲೀಸರ ಸೂಚನೆಗಳನ್ನು ಪರಿಗಣಿಸದೆ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಎದುರು ಸೇರಿಕೊಂಡು ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ದಿ. ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಠಾಣೆಯ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಎಫ್‌ಐಆರ್‌ ದಾಖಲಾಗಿದೆ.

ಅ.27 ರಂದು ಮಹೇಶ್ ತಿಮರೋಡಿ ಸೇರಿದಂತೆ ಸೌಜನ್ಯ ಪರ ಹೋರಾಟಗಾರರ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ಘೋಷಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ಕೊಟ್ಟಿರಲಿಲ್ಲ. ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಮಿನಿ ವಿಧಾನ ಸೌಧದ ಎದುರು ಸೇರಿದ್ದರು. ಇದರಿಂದ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಹಿಂ.ಜಾ.ವೇ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ವೆಂಕಪ್ಪ ಕೋಟ್ಯಾನ್, ಪ್ರಸನ್ನ ರವಿ, ಕುಸುಮಾವತಿ, ಟಿಕ್ಕಿ ರವಿ ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 189(2), 190, 285, 57 196331(0) 103(ii) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಇಲಾಖೆ ನೀಡಿದ ಸ್ಪಷ್ಟ ಸೂಚನೆಯನ್ನು ನಿರ್ಲಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತೆ ಮತ್ತು ಸುಳ್ಳು ದೂರುಗಳ ವಿರುದ್ಧ ಸಮರ ಎಂಬಿತ್ಯಾದಿ ಪ್ರಚೋದನಾತ್ಮಕ ಪೋಸ್ಟ್‌ ಮಾಡಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯನ್ನುಂಟುಮಾಡಿದ್ದಾರೆ. ಅ.27ರಂದು ಬೆಳ್ತಂಗಡಿ ತಾಲೂಕು ಕಚೇರಿಗೆ ಹೋಗಿ ಬರುವ ಸಾರ್ವಜನಿಕ ರಸ್ತೆ, ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಾಲೂಕು ಕಚೇರಿಗೆ ಹೋಗಿ ಬರುವವರಿಗೆ ಅಡ್ಡಿಯುಂಟು ಮಾಡಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಅಪ್ಪು ಅಜರಾಮರ! ನಾಲ್ಕು ವರ್ಷಗಳ ಹಿಂದೆ ನಡೆದಿದ್ದೇನು?

==============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 37

You cannot copy content of this page