ಬೆಂಗಳೂರು: Tulu Times l ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ನಾಳೆ (ಏಪ್ರಿಲ್ 9) ನಡೆಯಲಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಆದರೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮಧ್ಯಾಹ್ನ 3 ಗಂಟೆಯಿಂದಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.
ಫಲಿತಾಂಶ ಪ್ರಕಟಣೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕಚೇರಿಯಲ್ಲಿ ನಡೆಯಲಿದೆ. ಮಂಡಳಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಮತದಾನದ ನಂತರವೇ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ. ಚುನಾವಣಾ ಪ್ರಕ್ರಿಯೆಗೆ ಯಾವುದೇ ಅಡ್ಡಿ ಉಂಟಾಗದಂತೆ ಈ ಸಮಯವನ್ನು ಆಯ್ಕೆ ಮಾಡಲಾಗಿದೆ.
7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ನಿರೀಕ್ಷೆ
ಈ ಬಾರಿ ರಾಜ್ಯದಾದ್ಯಂತ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಫಲಿತಾಂಶದ ಬಗ್ಗೆ ಭಾರೀ ಕುತೂಹಲ ಇದೆ. ಫಲಿತಾಂಶ ಪರಿಶೀಲನೆ ವಿಧಾನ : ವಿದ್ಯಾರ್ಥಿಗಳು ಕೆಳಗಿನ ರೀತಿಯಲ್ಲಿ ಫಲಿತಾಂಶ ಪರಿಶೀಲಿಸಬಹುದು:
ಅಧಿಕೃತ ವೆಬ್‌ಸೈಟ್: karresults.nic.in
Karnataka 2nd PUC Result 2026 ಲಿಂಕ್ ಕ್ಲಿಕ್ ಮಾಡಬೇಕು. ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಬೇಕು. ಅಂಕಪಟ್ಟಿ ಪರದೆಯಲ್ಲಿ ಕಾಣಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ.
Second PUC results to be announced tomorrow (Apr. 09) – ತುಳುಟೈಮ್ಸ್
ಇದನ್ನೂ ಓದಿ :ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/fyRbYgSgCAw?si=hzux81Glh21DsEAg











