Udupi: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 28ರ ಶುಕ್ರವಾರದಂದು ಉಡುಪಿಯ “ಶ್ರೀ ಕೃಷ್ಣ ಮಠ”ಕ್ಕೆ ಭೇಟಿ ನೀಡಲಿದ್ದಾರೆ. ಗೀತಾ ಜಯಂತಿಯ ವಿಶೇಷ ದಿನದಂದು ಮೋದಿ ಅವರು ದೇಗುಲಕ್ಕೆ ಆಗಮಿಸಿಲಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿವೆ.
ಪ್ರಧಾನಿಯವರು ಶ್ರೀ ಕೃಷ್ಣನ ದರ್ಶನಕ್ಕಾಗಿ ಮಧ್ಯಾಹ್ನ ಸರಿ ಸುಮಾರು 12 ಗಂಟೆಗೆ ಶ್ರೀಕೃಷ್ಣ ಮಠದ ಪ್ರಾಂಗಣ ಪ್ರವೇಶಿಸುವ ನಿರೀಕ್ಷೆಯಿದೆ. ತದ ನಂತರ ಶ್ರೀ ಕೃಷ್ಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಬಳಿಕ ಸ್ವಾಮೀಜಿಯವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
ಈ ಸಂದರ್ಭ ಉಡುಪಿ ಮಠದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥಸ್ವಾಮೀಜಿ ಅವರೊಂದಿಗೆ ದೇಶದ ಪ್ರಧಾನಿ ವಿಶೇಷ ಸಂವಾದ ನಡೆಸಲಿದ್ದಾರೆ. ನವೆಂಬರ್ 28 ರಂದು ನಡೆಯುವ ಗೀತಾ ಜಯಂತಿ ಆಚರಣೆಗೆ ಇಲ್ಲಿ ಬಹುದೊಡ್ಡ ಕಾರ್ಯಕ್ರಮ ನಡೆಯಲಿದೆ. ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ‘ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ’ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲೂ ಮೋದಿಯವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಕ್ತರು ಮತ್ತು ಮೋದಿ ಅಭಿಮಾನಿಗಳು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆಯಿದೆ.
ಮೋದಿಯವರ ಭೇಟಿಯ ನಿಖರತೆಯನ್ನು ಪ್ರಧಾನಿ ಕಾರ್ಯಲಯವು ಈಗಾಗಲೇ ದೃಢಪಡಿಸಿವೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆ ಹಾಗೂ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಪ್ರಧಾನಿಯ ಭದ್ರತಾ ವ್ಯವಸ್ಥೆ ಹಾಗೂ ಸಂಚಾರದ ವಿವರಗಳ ಕುರಿತು ಮಾಹಿತಿ ದೊರೆಯಬೇಕಿದೆ.
ಇದನ್ನೂ ಓದಿ: Belthangady: ಕಾರು – ಬೈಕ್ ಭೀಕರ ಅಪಘಾತ; ಯುವಕ ಮೃತ್ಯು
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











