ಪುತ್ತೂರು

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: Tulu Times l ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು (ಏ.27) ಶಾಸಕ ಹರೀಶ್ ಪೂಂಜ ಅಧಿಕೃತವಾಗಿ ಚಾಲನೆ ನೀಡಿದರು. ಈ ಮಹತ್ವದ ಕಾಮಗಾರಿಗಾಗಿ ರೂ.50 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದಾಗಿ‌ ವರದಿಯಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಹರೀಶ್ ಪೂಂಜ ಅವರು, ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅವರು ವಿನಂತಿಸಿದರು.

Maladi-Puri road asphalting work launched – ತುಳುಟೈಮ್ಸ್

ಇದನ್ನೂ ಓದಿ :ಪಂದ್ಯಕ್ಕೂ ಮುನ್ನ ಭದ್ರತಾ ಆತಂಕ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 240 ಸಿಸಿಟಿವಿ ಕ್ಯಾಮೆರಾ ಸ್ಥಗಿತ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/EYKaZkoL8Qk?si=cFamYpJecOGA0FS7

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 13

You cannot copy content of this page