ನೆಲ್ಯಾಡಿ: Tulu Times l ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇದರ, ನೀರಕಟ್ಟೆ ಪ್ರದೇಶದಲ್ಲಿ ಸ್ಕೂಟಿ ಮತ್ತು ಲಾರಿ ನಡುವೆ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಮಹಿಳೆಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು. ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿರುವುದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟ ವ್ಯಕ್ತಿ ಮತ್ತು ಗಾಯಾಳುವಿನ ವಿಳಾಸ ಹಾಗೂ ಪೂರ್ಣ ವಿವರಗಳನ್ನು ತನಿಖೆ ಮಾಡುತ್ತಿದ್ದು, ಅಪಘಾತಕ್ಕೆ ಲಾರಿ ಚಾಲಕನ ವಿರುದ್ಧ ತನಿಖೆ ಆರಂಭವಾಗಿದೆ.
Nelyadi: Scooty collides with lorry, rider dies – ತುಳುಟೈಮ್ಸ್
ಇದನ್ನೂ ಓದಿ :ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹಕ್ಕೆ 54 ವರ್ಷ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/EYKaZkoL8Qk?si=InqnttnYY4yZn28e









