ಬೆಳ್ತಂಗಡಿ : Tulu Times l ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಷಡ್ಯಂತ್ರ ರೂಪಿಸಿದ ಆರೋಪ ಹೊತ್ತಿರುವ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಶಾಕ್ ಮೇಲೆ ಶಾಕ್ ಎದುರಾಗಿತ್ತು. ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಆದೇಶ ಹೋರಡಿಸಲಾಗಿತ್ತು.
ಇದೀಗ ಬಂದಿರುವ ವರದಿ ಪ್ರಕಾರ, ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿ, ಗಡಿಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಇದೇ ವೇಳೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಎರಡು ವಾರಗಳ ಕಾಲ ಸಮಯ ನೀಡಿದ ಪೀಠ. ಗಡಿಪಾರು ಸಂಬಂಧ ಎರಡು ವಾರ ಗಡಿಪಾರು ಆದೇಶಕ್ಕೆ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
Mahesh Shetty’s petition seeking Timarodi’s deportation order dismissed – ತುಳುಟೈಮ್ಸ್
ಇದನ್ನೂ ಓದಿ :ಡಾಲರ್ ಎದುರು ರೂಪಾಯಿ ಕುಸಿತ : ತೈಲ ಬೆಲೆ ಏರಿಕೆಯಿಂದ ಒತ್ತಡ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/4pEuD7fDOuo?si=qdZo5bMcbZwwOUi_









