ಬೆಳ್ತಂಗಡಿ

ಉದ್ಯೋಗ ಖಾತರಿ ಯೋಜನೆಯಲ್ಲಿ ಬಂದಾರು ಗ್ರಾಮ ಪಂಚಾಯಿತಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: Tulu Times l ಮುಲ್ಕಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೌರವ ಸಮರ್ಪಣೆಯನ್ನು ನಡೆಸುವುದಾಗಿ ವರದಿಯಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್‌ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಾರ್ನಾಡು, ಮುಲ್ಕಿ ಇಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ 2025-26ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದ.ಕ ಜಿಲ್ಲಾ ಪಂಚಾಯತಿಯಿಂದ ಪಡೆದ ವರದಿಯಂತೆ ಜಿಲ್ಲಾ ಮಟ್ಟದಲ್ಲಿ ಬಂದಾರು ಗ್ರಾಮ ಪಂಚಾಯತ್ ಅತ್ಯಧಿಕ ಮಾನವ ದಿನಗಳನ್ನು ಸೃಜಿಸಿದ್ದು ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಈ ಪಂಚಾಯತ್ ನನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Bandaru Gram Panchayat ranks first in the district in the employment guarantee scheme – ತುಳುಟೈಮ್ಸ್

ಇದನ್ನೂ ಓದಿ :ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹೊರಡಿಸಿದ್ದ ಅರ್ಜಿ ವಜಾ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=N0zqqgoDJ29hTd5v

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page