ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಾಜಿ ಸಿಎಂ ಬಿಎಸ್ ವೈ ಅಭಿಮಾನೋತ್ಸವ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: Tulu Times l ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟ‌ರ್ ಬಿಡುಗಡೆ ಸಮಾರಂಭವು ಮೇ 2ರಂದು ಗುರುವಾಯನಕೆರೆ ಹವ್ಯಕ ಭವನದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಸ್ಟ‌ರ್ ಬಿಡುಗಡೆ ಮಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್,  ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್‌, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಮನ್ ಕೀ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಹಾಗೂ  ಪಕ್ಷದ ಜವಾಬ್ದಾರಿಯ ಪ್ರಮುಖರು ಉಪಸ್ಥಿತರಿದ್ದರು.

B. S. Yediyurappa’s Appreciation Festival: Poster released by MLA Harish Poonjarava – ತುಳುಟೈಮ್ಸ್

ಇದನ್ನೂ ಓದಿ :ಆಟೋ ಎಲ್ ಪಿಜಿ ದರ ಲೀಟರ್‌ಗೆ ಭಾರೀ ಏರಿಕೆ: ಚಾಲಕರಿಗೆ ಹೆಚ್ಚಿದ ಹೊರೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=iMX0NHsKjfKO_gRb

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 186

You cannot copy content of this page