ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

Ullal: ಆಕ್ಟಿವಾಗೆ ಡಿಕ್ಕಿ ಹೊಡೆದ ಬಸ್‌ – ಸವಾರ ಸಾವು

Ullal: ಖಾಸಗಿ ಬಸ್ಸೊಂದು ಆಕ್ಟಿವಾಗೆ ಡಿಕ್ಕಿ ಹೊಡೆದ ಪರಿಣಾಮ ಆಕ್ಟಿವಾ ಸವಾರ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ನಡೆದಿದೆ. ರಾ.ಹೆ.66 ರ ಅಡಂ ಕುದ್ರು ಎಂಬಲ್ಲಿ ಅಪಘಾತ ಸಂಭವಿಸಿದೆ. ಅ. 30ರ ಗುರುವಾರ ಬೆಳಿಗ್ಗೆ ಅಪಘಾತ ನಡೆದಿದೆ.

ಬೊಕ್ಕಪಟ್ಣದ ಬೇಂಗ್ರೆ ನಿವಾಸಿ ನಾಗೇಶ್ ಪುತ್ರನ್(62) ಗಂಭೀರ ಸ್ವರೂಪದ ಗಾಯಗಳಾಗಿ ಅಸುನೀಗಿದ ದುರ್ದೈವಿ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ನಾಗೇಶ್‌ ಅವರು ಚಲಾಯಿಸುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ನಾಗೇಶ್‌ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಉಗ್ರರ ನೆಲದಿಂದ ತಪ್ಪಿಸಿಕೊಂಡ ಹಿಂದೂ ಯುವತಿಗೆ ಭಾರತೀಯ ಪೌರತ್ವ

===============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess   

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page