Bengaluru: ಇಂದು ರಾಜ್ಯದೆಲ್ಲೆಡೆ ಕನ್ನಡದ ಕಂಪು ಹರಡಿದೆ. ಇಂದು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಎಪ್ಪತ್ತನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ನಡೆದಿದೆ.
ಈ ವೇಳೆ ಮಾತನಾಡಿದ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಅರಸಿನ, ಕುಂಕುಮ ಬಣ್ಣವುಳ್ಳ ಕನ್ನಡಾಂಬೆಯ ಧ್ವಜವನ್ನು ನಮ್ಮ ಹಿರಿಯರು ಶುಭದ ಸಂಕೇತವಾಗಿ ಸ್ವೀಕರಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಕುರಿತ ಸಂದೇಶ ನೀಡಿದರು.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವದ ದಿನ ಪುಂಡಾಟ ಮೆರೆದ ಎಂಇಎಸ್ ..!
ಕನ್ನಡಕ್ಕಾಗಿ ಲಕ್ಷಾಂತರ ಜನ ಹೋರಾಡಿದ್ದಾರೆ..!
ಕನ್ನಡ, ಕರ್ನಾಟಕದ ಏಕೀಕರಣಕ್ಕಾಗಿ ಲಕ್ಷಾಂತರ ಜನರು ಹೋರಾಟ ಮಾಡಿದ್ದಾರೆ. ಅವತ್ತಿನ ಕಾಲದಲ್ಲಿ ಲಾಠಿಯೇಟು ತಿಂದಿದ್ದರು. ಕಷ್ಟವನ್ನೂ ಅನುಭವಿಸಿದ್ದರು ಎಂದು ನೆನಪಿಸಿದರು. ಕರ್ನಾಟಕವನ್ನು ಒಟ್ಟುಗೂಡಿಸಲು ಹಿರಿಯರು ಮಾಡಿದ ತ್ಯಾಗಕ್ಕೆ ನಾವೆಲ್ಲರೂ ಕೃತಜ್ಞತೆ ಸಲ್ಲಿಸಬೇಕು ಅವರನ್ನು ನೆನಪಿಸಬೇಕಿದೆ ಎಂದು ತಿಳಿಸಿದರು.
ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡಕ್ಕೆ ಅದರದೇ ಆದ ಹಿರಿಮೆ, ಗೌರವ ಇದೆ ಎಂದು ವಿಶ್ಲೇಷಿಸಿದರು. ಕನ್ನಡದ ಬೆಳವಣಿಗೆಗೆ ನೂರಾರು ಜನ ಸಾಹಿತಿಗಳು ತಮ್ಮ ಕೊಡುಗೆ ನೀಡಿದ್ದಾರೆ ಎಂದು ವಿವರಿಸಿದರು. ಕುವೆಂಪು ಅವರ ಹಾಡನ್ನು ನಾವು ನಾಡಗೀತೆಯನ್ನಾಗಿ ಸ್ವೀಕರಿಸಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: Bahubali ರಿ-ರಿಲೀಸ್; ಬಾಕ್ಸ್ ಆಫೀಸ್‌ನಲ್ಲಿ ಮತ್ತೆ ದಾಖಲೆ
ಯಾರೆಲ್ಲ ಭಾಗಿಯಾಗಿದ್ದರು..?
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಸಹ-ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ ರಾವ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಲವಾರು ಕಡೆ ವಿಜೃಂಭನೆಯಿಂದ ಕನ್ನಡದ ಹಬ್ಬವನ್ನು ಆಚರಿಸಲಾಯಿತು.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











