ಬ್ರೇಕಿಂಗ್ ನ್ಯೂಸ್
ಬೆಳ್ತಂಗಡಿ

ಧರ್ಮಸ್ಥಳದಲ್ಲಿ ವಾರ್ಷಿಕ ಉತ್ಸವ, ಯಕ್ಷಗಾನ ಮೇಳ ಸಂಪನ್ನ

ಬೆಳ್ತಂಗಡಿ: Tulu Times l ಪತ್ತನಾಜೆ ಸಂಭ್ರಮದ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ವಾರ್ಷಿಕ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಸಂಪನ್ನಗೊಂಡವು. ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ರಂಗಪೂಜೆ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಗೆ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಾವರೋಹಣ ಕಾರ್ಯಕ್ರಮಗಳು ಜರುಗಿದವು. ನಂತರ ಉತ್ಸವ ಮೂರ್ತಿಯನ್ನು ಮರುಪ್ರತಿಷ್ಠಾಪಿಸಿ ಗರ್ಭಗುಡಿಗೆ ಕರೆತರಲಾಯಿತು.

ಮುಂದಿನ ಕಾರ್ತಿಕ ಮಾಸದಲ್ಲಿ ನಡೆಯಲಿರುವ ದೀಪೋತ್ಸವದೊಂದಿಗೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಮತ್ತೆ ಆರಂಭಗೊಳ್ಳಲಿವೆ ಎಂದು ದೇವಸ್ಥಾನ ಆಡಳಿತ ತಿಳಿಸಿದೆ. ಇಲ್ಲಿ ತನಕ ವಾರ್ಷಿಕ ಪ್ರವಾಸವನ್ನು ಪೂರ್ಣಗೊಳಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಕೃಪಪೋಷ್ಟಿತ ಯಕ್ಷಗಾನ ಮಂಡಳಿ ಧರ್ಮಸ್ಥಳದ ಮಂಜುಕೃಪಾದಲ್ಲಿ ಮೇಳದ ಆರಾಧ್ಯ ದೈವ ಶ್ರೀ ಮಹಾಗಣಪತಿಗೆ ಗಣಯಾಗ ಮತ್ತು ಮಹಾಪೂಜೆ ಸಲ್ಲಿಸಲಾಯಿತು.

ಸಂಜೆಯ ಮಹಾಪೂಜೆ ಬಳಿಕ ಶ್ರೀ ಗಣಪತಿಯನ್ನು ಭವ್ಯ ಮೆರವಣಿಗೆಯೊಂದಿಗೆ ದೇವಸ್ಥಾನದ ಆವರಣಕ್ಕೆ ಕರೆತರಲಾಯಿತು. ದೇವಾಲಯದ ಆನೆಗಳು, ಬಸವ, ಕೇರಳ ಚೆಂಡೆ ವಾದ್ಯಗೋಷ್ಠಿ, ಗಂಟೆಗಳು ಹಾಗೂ ಸಂಗೀತ ವಾದ್ಯ ಬಳಗ ಮೆರವಣಿಗೆಗೆ ವಿಶೇಷ ಕಳೆ ತಂದವು. ದರ್ಶನ ಸೇವೆಯ ಬಳಿಕ ಛತ್ರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ಹೆಗ್ಗಡೆ, ಮೇಳದ ಯಜಮಾನ ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ದೇವಾಲಯದ ಆಡಳಿತಾಧಿಕಾರಿಗಳಾದ ಲಕ್ಷ್ಮೀ ನಾರಾಯಣ ರಾವ್ ಮತ್ತು ಸುಬ್ರಹ್ಮಣ್ಯ ಪ್ರಸಾದ್, ಬಿ. ಭುಜಬಲಿ, ಸೀತಾರಾಮ ತೋಳ್ಪಡಿತ್ತಾಯ, ಉಜಿರೆ ಅಶೋಕ್ ಭಟ್, ಮೇಳದ ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಹಾಗೂ ಯಕ್ಷಗಾನ ಕಲಾವಿದರು ಉಪಸ್ಥಿತರಿದ್ದರು.

Annual festival, Yakshagana Mela complete in Dharmasthala – ತುಳು ಟೈಮ್ಸ್

ಇದನ್ನೂ ಓದಿ : ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆಯಲ್ಲಿ ಪ್ರಿಯಾಂಕಾ ಗಾಂಧಿಯ ಪಾತ್ರವಿದೆಯೇ?

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/live/4pEuD7fDOuo?si=NM0tBe15Cbzi85Bp

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 15

You cannot copy content of this page