ಬ್ರೇಕಿಂಗ್ ನ್ಯೂಸ್
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಮಣಿದ ಸಿದ್ದರಾಮಯ್ಯ

ರಾಜಕೀಯ : Tulu Times l ಕರ್ನಾಟಕ ರಾಜಕೀಯದಲ್ಲಿ ಕಳೆದ ಮೂರು ವರ್ಷಗಳಿಂದ ಚರ್ಚೆಯಾಗುತ್ತಿದ್ದ ನಾಯಕತ್ವ ಬದಲಾವಣೆಗೆ ಇದೀಗ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿರುವುದಾಗಿ ವರದಿಗಳು ತಿಳಿಸಿವೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಗುರುವಾರ ಬೆಳಗ್ಗೆ ನಡೆದ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ಈ ನಿರ್ಧಾರವನ್ನು ತಿಳಿಸಿದ್ದರೆಂದು ಹೇಳಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಭಾಗವಹಿಸಿದ್ದರು. ಮಸಾಲೆ ದೋಸೆ, ಇಡ್ಲಿ, ಸಾಂಬಾರ್, ಚಟ್ನಿ ಮತ್ತು ಕೇಸರಿಬಾತ್‌ ಒಳಗೊಂಡ ಉಪಾಹಾರದ ಮಧ್ಯೆ ನಡೆದ ಈ ಸಭೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಯಿತು.

ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ;

ಸಭೆಯ ಆರಂಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರಸ್ಪರ ಅಪ್ಪಿಕೊಂಡ ದೃಶ್ಯ ಹಾಗೂ ಡಿಕೆಶಿ ಅವರು ಸಿದ್ದರಾಮಯ್ಯರ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದ ಕ್ಷಣ ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆಯಿತು. ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಕಾಂಗ್ರೆಸ್ ಒಳಗಿನ ಅಧಿಕಾರ ಹೋರಾಟದ ಹಿನ್ನೆಲೆ ಈ ಘಟನೆಗೆ ಹೆಚ್ಚಿನ ರಾಜಕೀಯ ಅರ್ಥ ನೀಡಲಾಗಿದೆ. ‌2023ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಒಳಗೆ ‘ಅಧಿಕಾರ ಹಂಚಿಕೆ’ ಕುರಿತ ಒಪ್ಪಂದವಿದೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅದರ ಪ್ರಕಾರ ಮೊದಲ 2.5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ನಂತರ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ನೀಡಲಾಗುತ್ತದೆ ಎಂಬ ರಾಜಕೀಯ ಚರ್ಚೆ ನಿರಂತರವಾಗಿ ಕೇಳಿಬರುತ್ತಿತ್ತು. ಆದರೆ ಈ ಒಪ್ಪಂದವನ್ನು ಕಾಂಗ್ರೆಸ್ ಅಧಿಕೃತವಾಗಿ ಎಂದಿಗೂ ಒಪ್ಪಿಕೊಂಡಿರಲಿಲ್ಲ.

ಡಿಕೆಶಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಾಚರಣೆ ;

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಮ್ಯಾರಥಾನ್ ಸಭೆಗಳ ಬಳಿಕ ಸಿದ್ದರಾಮಯ್ಯರನ್ನು ರಾಜೀನಾಮೆಗೆ ಮನವೊಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಅವರಿಗೆ ರಾಜ್ಯಸಭಾ ಸ್ಥಾನ ಹಾಗೂ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ನೀಡುವ ಪ್ರಸ್ತಾಪವೂ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬೆಳವಣಿಗೆಯೊಂದಿಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ಅಂತಿಮ ಘೋಷಣೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಅವಲಂಬಿತವಾಗಿದೆ. ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಹೊರಬಿದ್ದ ತಕ್ಷಣ ಡಿಕೆಶಿ ಬೆಂಬಲಿಗರು ಅವರ ನಿವಾಸದ ಹೊರಗೆ ಸೇರಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು ಎಂದು ವರದಿಯಾಗಿದೆ.

Siddaramaiah accepts Congress high command’s decision – ತುಳು ಟೈಮ್ಸ್

ಇದನ್ನೂ ಓದಿ :ಭವಿಷ್ಯದ ಸೂಪರ್ ಸ್ಟಾರ್ ವೈಭವ್ ಸೂರ್ಯವಂಶಿಗೆ ಸೂರ್ಯಕುಮಾರ್ ಯಾದವ್ ಮೆಚ್ಚುಗೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/EYKaZkoL8Qk?si=0kWbf0EJ9nWCRuOY

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 17

You cannot copy content of this page