ಬೆಂಗಳೂರು: Tulu Times l ಸಿಲಿಕಾನ್ ಸಿಟಿ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿರುವ ಕೌಸಲ್ಯ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಾಲೆಯ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿದೆ. ಘಟನಾ ಸ್ಥಳದ ದೃಶ್ಯಗಳಲ್ಲಿ ಶಾಲೆಯ ಆವರಣವನ್ನು ಬೆಂಕಿ ಆವರಿಸಿರುವುದು ಕಂಡುಬಂದಿದೆ.

ಮಾಹಿತಿಯ ಪ್ರಕಾರ, ಶಾಲೆಗೆ ರಜೆ ಇರೋದ್ರಿಂದ ಭಾರೀ ಅವಘಡ ತಪ್ಪಿದೆ. ಶಾಲೆಯ 5 ನೇ ಮಹಡಿ ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾಹಿತಿ ಪೋಷಕರು ಹಾಗೂ ಸಾರ್ವಜನಿಕರಿಗೆ ಸಮಾಧಾನ ತಂದಿದೆ. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು.
ಅಗ್ನಿಶಾಮಕ ದಳದ ತಂಡ ತಕ್ಷಣವೇ ಕಾರ್ಯಾಚರಣೆ ಆರಂಭಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದು, ಬೆಂಕಿ ಸಮೀಪದ ಕಟ್ಟಡಗಳಿಗೆ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳವನ್ನು ಸುರಕ್ಷಿತಗೊಳಿಸುವ ಕಾರ್ಯವೂ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ನಂತರ ಘಟನೆಯ ಕಾರಣ ಕುರಿತು ಸ್ಪಷ್ಟ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ಅಧಿಕೃತ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
Bengaluru: Fire accident at a private school – ತುಳು ಟೈಮ್ಸ್
ಇದನ್ನೂ ಓದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ವಾರಪೂರ್ತಿ ಭಾರೀ ಮಳೆ ಸಾಧ್ಯತೆ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/ox4FkJQkuF4?si=qbYjkTVBQjm8Okgl











