Shikaripura: 70 ನೇ ವರ್ಷದ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಧ್ಯಮಗಳ ಜೊತೆ ಮಾತನಾಡಿದರು.
ಶಿಕಾರಿಪುರದಲ್ಲಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ನಮ್ಮ ನಾಡಿದ ಹೆಸರು ಕರ್ನಾಟಕವಾಗಿದೆ. ಕನ್ನಡವು ನಮ್ಮೆಲ್ಲರ ಉಸಿರಾಗಲಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಶಿಸಿದರು.
ಕನ್ನಡಮ್ಮನ ಸೇವೆ ಮಾಡೋಣ.. ವಿಜಯೇಂದ್ರ!
ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಅದನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ಅವರು ಕನ್ನಡ ರಾಜ್ಯೋತ್ಸವದ ಶುಭಕೋರಿದರು. ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ರಘು ಹೆಚ್.ಎಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ಶುಭಕೋರಿದ್ದಾರೆ. ಸಿಎಂ ಸಿದ್ರಾಮಯ್ಯ ಟ್ವೀಟ್ ಮಾಡಿ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಕರ್ನಾಟಕದ ಜನರು ಸಮಾರ್ಪಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಕರ್ನಾಟಕದ ಅತ್ಯುತ್ತಮ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ರಾಜ್ಯವು ಬುದ್ಧಿವಂತಿಕೆಯಲ್ಲಿ ಬೇರೂರಿರುವ ಪ್ರಗತಿಯ ಮನೋಭಾವವನ್ನು ಸಾಕಾರಗೊಳಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ: ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ..!
…………………………………………………………………………………………………………..
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











