ಬ್ರೇಕಿಂಗ್ ನ್ಯೂಸ್
ಮಂಗಳೂರು

ಗುಂಡಿ ಮುಚ್ಚದ ಅಧಿಕಾರಿಗಳಿಗೆ ಬಾಳೆ ಗಿಡದ ಮೂಲಕ ತಕ್ಕ ಉತ್ತರ

ಕಾರ್ಕಳ : Tulu Times l ಆಡಳಿತದ ನಿರ್ಲಕ್ಷ್ಯವನ್ನು ಖಂಡಿಸಿ ಕಾರ್ಕಳದ ಸ್ಥಳೀಯರು ಮತ್ತು ಆಟೋ ಚಾಲಕರು ಸೋಮವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಕಳ ಬಸ್ ನಿಲ್ದಾಣದ ಸಮೀಪದ ಆಟೋ ರಿಕ್ಷಾ ನಿಲ್ದಾಣದ ಎದುರಿನ ರಸ್ತೆಯಲ್ಲಿ ಉಂಟಾಗಿರುವ ಬೃಹತ್ ಗುಂಡಿಯೊಳಗೆ ಬಾಳೆ ಗಿಡ ನೆಟ್ಟು ಅಧಿಕಾರಿಗಳ ಗಮನ ಸೆಳೆಯಲು ಪ್ರಯತ್ನಿಸಲಾಯಿತು.

ಕೆಲವು ದಿನಗಳ ಹಿಂದೆ ಇದೇ ರಸ್ತೆಯನ್ನು ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಾಗಿ ಅಗೆದಿದ್ದ ಇಲಾಖೆ, ಕಾಮಗಾರಿ ಮುಗಿದ ಬಳಿಕ ಗುಂಡಿಯನ್ನು ಸಮರ್ಪಕವಾಗಿ ಮುಚ್ಚಿರಲಿಲ್ಲ. ಮಳೆ ಆರಂಭವಾದ ಬಳಿಕ ಸಡಿಲ ಮಣ್ಣು ಕುಸಿದು ರಸ್ತೆ ಮಧ್ಯೆ ದೊಡ್ಡ ಗುಂಡಿ ನಿರ್ಮಾಣವಾಗಿದೆ. ಮಳೆ ನೀರು ಗುಂಡಿಯಲ್ಲಿ ತುಂಬಿರುವುದರಿಂದ ಅದರ ಆಳವನ್ನು ವಾಹನ ಸವಾರರು ಅಂದಾಜಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ದ್ವಿಚಕ್ರ ವಾಹನ ಸವಾರರು ಮತ್ತು ಆಟೋ ಚಾಲಕರು ಆಗಾಗ ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಹೃದಯಭಾಗದಲ್ಲಿರುವ ಈ ರಸ್ತೆ ಮೂಲಕ ಪ್ರತಿದಿನ ಸಾವಿರಾರು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ನೂರಾರು ವಾಹನಗಳು ಸಂಚರಿಸುತ್ತವೆ. ಆಟೋ ನಿಲ್ದಾಣದ ಎದುರೇ ಈ ಅಪಾಯಕಾರಿ ಗುಂಡಿ ಇರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಆಡಳಿತ ಎಚ್ಚೆತ್ತುಕೊಂಡು ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯ ನಿವಾಸಿಗಳು ಹಾಗೂ ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ.

A fitting reply to officials who don’t close the pothole with a banana plant – ತುಳುಟೈಮ್ಸ್

ಇದನ್ನೂ ಓದಿ :ಕೊಲೆಗೂ ಮುನ್ನ ಗೂಗಲ್ ಸರ್ಚ್, ನಂತರ ತ್ರಿವಳಿ ಹತ್ಯೆ : ಬೆಚ್ಚಿಬೀಳಿಸುವ ಸತ್ಯ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/DA3LOk_-2ik

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 15

You cannot copy content of this page