ದಕ್ಷಿಣ ಕನ್ನಡ : Tulu Times l ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ಜುಲೈ 2 (ಗುರುವಾರ) ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿವರೆಗೆ) ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗಳು, ಹೊಳೆಗಳು, ಕೆರೆಗಳು ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಪೋಷಕರು ತಮ್ಮ ಮಕ್ಕಳು ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಹೋಗದಂತೆ ವಿಶೇಷ ಎಚ್ಚರ ವಹಿಸಬೇಕು ಎಂದು ಮನವಿ ಮಾಡಲಾಗಿದೆ.

ಪ್ರತಿಕೂಲ ಹವಾಮಾನ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿಗಳಲ್ಲೇ ಉಳಿದುಕೊಂಡು ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲ್ಲೂಕಿನಲ್ಲೂ ಅಗತ್ಯವಿದ್ದರೆ ಆರೈಕೆ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚಿಸಲಾಗಿದೆ. ಯಾವುದೇ ಪ್ರಕೃತಿ ವಿಕೋಪ ಅಥವಾ ತುರ್ತು ಪರಿಸ್ಥಿತಿ ಎದುರಾದಲ್ಲಿ, ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
Red alert in Dakshina Kannada: Holiday declared for schools and colleges on July 2 – ತುಳು ಟೈಮ್ಸ್
ಇದನ್ನೂ ಓದಿ : ಸೂರ್ಯಾಸ್ತದ ಸಮಯದಲ್ಲಿ ಮಲಗಿದ್ರೆ ಏನಾಗುತ್ತದೆ? : ವಾಸ್ತುಶಾಸ್ತ್ರ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :











