ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 3ರಂದು ರಜೆ

ಮಂಗಳೂರು : Tulu Times |  ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆ ನೀಡಿರುವ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 3 (ಶುಕ್ರವಾರ) ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ (ಪಿಯು) ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ  ದರ್ಶನ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ರಜೆ ಆದೇಶವು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು 12ನೇ ತರಗತಿವರೆಗಿನ ವಸತಿ ಪಿಯು ಕಾಲೇಜುಗಳಿಗೆ ಅನ್ವಯವಾಗಲಿದೆ.

ಜಿಲ್ಲಾಡಳಿತ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗಳು, ಹೊಳೆಗಳು, ಕೆರೆಗಳು ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಿದೆ. ಪೋಷಕರು ಮಕ್ಕಳನ್ನು ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ, ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿಗಳಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ. ಅಗತ್ಯವಿದ್ದರೆ ಪ್ರತಿ ತಾಲ್ಲೂಕಿನಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ. ಮಳೆ ಅಥವಾ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

Holiday for schools and PU colleges in Dakshina Kannada district on July 3. – ತುಳು ಟೈಮ್ಸ್

ಇದನ್ನೂ ಓದಿ :ಮೂಳೆಗಳನ್ನು ದುರ್ಬಲಗೊಳಿಸುವ ಈ ಆಹಾರಗಳನ್ನು ಅತಿಯಾಗಿ ಸೇವಿಸಬೇಡಿ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/TP-rtIPAbk0?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page