ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪಿಯು ಪ್ರವೇಶ ತಡವಾದರೂ ಚಿಂತೆ ಬೇಡ; ದಂಡ ಶುಲ್ಕ ಮನ್ನಾ ಮಾಡಿದ ಸರ್ಕಾರ

ಬೆಂಗಳೂರು : Tulu Times I ಮೊದಲ ಹಾಗೂ ದ್ವಿತೀಯ ಪಿಯುಸಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. 2026–27ನೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ (ಪಿಯು ಕಾಲೇಜು) ತಡವಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ ದಂಡ ಶುಲ್ಕ ವಸೂಲಿ ಮಾಡಲಾಗುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.


ಈ ನಿರ್ಧಾರದಿಂದ ನಿಯಮಿತ ಪ್ರವೇಶ ಅವಧಿಯನ್ನು ತಪ್ಪಿಸಿಕೊಂಡ ವಿದ್ಯಾರ್ಥಿಗಳು ವಿಸ್ತರಿತ ಪ್ರವೇಶ ಅವಧಿಯಲ್ಲಿ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ. ಆರ್ಥಿಕ ಸಮಸ್ಯೆಯಿಂದ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರ ಜೊತೆಗೆ, ಈಗಾಗಲೇ ತಡ ಪ್ರವೇಶಕ್ಕಾಗಿ ದಂಡ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಘೋಷಣೆ ಮಾಡಲಾಗಿದೆ. ಈ ಹಿಂದೆ ಪಾವತಿಸಿದ ದಂಡದ ಮೊತ್ತವನ್ನು ಸರ್ಕಾರ ಮರುಪಾವತಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಸೌಲಭ್ಯವು 2026–27ನೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜುಗಳ ಮೊದಲ ಹಾಗೂ ದ್ವಿತೀಯ ಪಿಯುಸಿ ತಡ ಪ್ರವೇಶಗಳಿಗೆ ಅನ್ವಯವಾಗಲಿದೆ.

ತಡ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ದಂಡದ ಹಣ ಮರುಪಾವತಿಗೆ ಅರ್ಹರಾಗಿರುವವರು ಹೆಚ್ಚಿನ ಮಾಹಿತಿಗಾಗಿ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು ಅಥವಾ ಉಪನಿರ್ದೇಶಕರ (ಪದವಿಪೂರ್ವ ಶಿಕ್ಷಣ) ಕಚೇರಿಯನ್ನು ಸಂಪರ್ಕಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಸರ್ಕಾರದ ಈ ನಿರ್ಧಾರದಿಂದ ಆರ್ಥಿಕ ಸಂಕಷ್ಟದಲ್ಲಿರುವ ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗಲಿದ್ದು, ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವ ಪರಿಸ್ಥಿತಿಯನ್ನು ತಪ್ಪಿಸಲು ಸಹಕಾರಿಯಾಗಲಿದೆ.

No need to worry about delayed PU admission; government waives penalty fee. – ತುಳು ಟೈಮ್ಸ್

ಇದನ್ನೂ ಓದಿ : ಮಕ್ಕಳ ಯಶಸ್ಸಿಗೆ ಚಾಣಕ್ಯ ನೀತಿಯ 9 ಅಮೂಲ್ಯ ಪಾಠಗಳು

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtube.com/shorts/EyJvAc5Pqz8?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page