ಅಪ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುಮಾರು 10 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಬೆಳ್ಳಗೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ್ದಲ್ಲಿ ಭೂಕಂಪನ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ಧರೆಗೂರುಳಿದೆ. ಪರಿಣಾಮ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿ ಸುಮಾರು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆಯು 6.3 ರಷ್ಟಿತ್ತೆಂದು ದಾಖಲಿಸಿದ್ದಾರೆ. ಭೂಕಂಪನದ ಕೇಂದ್ರಬಿಂದು ಅಫ್ಘಾನಿಸ್ತಾನದ ಖುಲ್ಮ್‌ನಿಂದ ಪಶ್ಚಿಮ-ನೈಋತ್ಯಕ್ಕೆ 22 ಕಿ.ಮೀ ದೂರವಿದ್ದು, 28 ಕಿ.ಮೀ ಆಳದಲ್ಲಿದೆ ಎಂದು ಅಮೆರಿಕ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರವಷ್ಟೇ, ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿತ್ತು. ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಮತ್ತು ನಂತರದ ಕಂಪನಗಳ ಸರಣಿಯಲ್ಲಿ 2,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಕೆಲವೇ ತಿಂಗಳುಗಳಲ್ಲಿ ಈ ಭೂಕಂಪ ಸಂಭವಿಸಿದೆ.
ಇದನ್ನೂ ಓದಿ :BBK12: ಕಿಚ್ಚನ ಜೊತೆ ಮಾಳು ಮನವಿ ಮಾಡಿದ್ದು ನಾಟಕೀಯವಾಗಿತ್ತಾ..?
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











